ಬಳ್ಳಾರಿ- ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳ ಸಾವಿನ ಸರಣಿ‌ ಮುಂದುವರೆದಿದೆ. ಗಣಿ ನಾಡು ಬಳ್ಳಾರಿಯಲ್ಲಿ ಸಹ ಮತ್ತೊಬ್ಬ ಸರ್ಕಾರಿ  ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಉಪ ವಲಯ ಅರಣ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಡೂರಿನ ಮನೆಯಲ್ಲಿ ಯಾರೂ ಇಲ್ಲದ ಮೇಳೆಯಲ್ಲಿ  ಬಸವರಾಜ ವೀರಾಪೂರ( 31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವರಾಜ ಮೂಲತಹ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಮಾಪೂರ ಗ್ರಾಮದ ನಿವಾಸಿಯಾಗಿದ್ದು. ಕಳೆದ ಎರಡು ವರ್ಷಗಳಿಂದ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸ್ತಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಒಂದು ತಿಂಗಳ ಹಿಂದೆ ಅಷ್ಟೆ ಮದುವೆಯಾಗಿದ್ದರು‌. ಬಸವರಾಜ್ ಕಳೆದ ಎರಡು ದಿನಗಳ ಹಿಂದೆ‌ ಹೆಂಡತಿಯನ್ನು  ತವರು ಮನೆಗೆ‌‌ ಕಳಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಆದ್ರೆ ಆತ್ಮಹತ್ಯೆಗೆ  ನಿಕರ ಕಾರಣ ತಿಳಿದುಬಂದಿಲ್ಲ. ಸದ್ಯ ಸಂಡೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ….

About Author

Priya Bot

Leave A Reply