ಗ್ಯಾಸ್ ಟ್ಯಾಂಕರ್ ಪಲ್ಟಿ ತಪ್ಪಿದ ಭಾರಿ ದುರಂತ

0

ಕಾರವಾರ  – ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿರುವ ಘಟನೆ, ಕಾರವಾರ ಜಿಲ್ಲೆಯ ಯಲ್ಲಾಪುರ-ಹಳಿಯಾಳ ರಸ್ತೆ ತಾಟವಾಳದ ಬಳಿ ನಡೆದಿದೆ‌. ನಿನ್ನೆ ಸಂಜೆ ಸುಮಾರಿಗೆ ಈ ಒಂದು ಘಟನೆ ನಡೆದಿದ್ದು, ಮಂಗಳೂರಿನಿಂದ ರಾಮನಗರಕ್ಕೆ ತೆರಳುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆಯಲ್ಲಿ, ರಸ್ತೆ ಪಕ್ಕದ ಅರಣ್ಯಕ್ಕೆ ಗ್ಯಾಸ್   ಟ್ಯಾಂಕರ್  ಉರುಳಿ ಬಿದ್ದಿದೆ‌. ಅದೃಷ್ಟವಶಾತ್ ವಾಹನದಲ್ಲಿ ಇದ್ದ ಗ್ಯಾಸ್ ಸೋರಿಕೆಯಾಗಿಲ್ಲಾ. ಟ್ಯಾಂಕರ್ ಮುಂಭಾಗ ಜಖಂ, ಚಾಲಕ ಅಭಿಷೇಕ ರಾಯ್ (27)ಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply