ಬಸ್ ವ್ಯವಸ್ಥೆ ಇಲ್ಲ ಚಕ್ಕಡಿ ಕಟ್ಟಿಕೊಂಡು SSLC ಪರೀಕ್ಷೆಗೆ ಬಂದ ವಿದ್ಯಾರ್ಥಿಗಳು

0

ಹುಬ್ಬಳ್ಳಿ  

ಮೂಲಭೂತ ಸೌಕರ್ಯ ಒದಗಿಸುವ ಸರ್ಕಾರ ಗ್ರಾಮವನ್ನು ನಿರ್ಲಕ್ಷಿಸುತ್ತಿದೆ. ಹೌದು ಕೋವಿಡ್ ಸಂಕಷ್ಟದ ನಡುವೆಯಲ್ಲಿಯೇ ಸರ್ಕಾರ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭಗೊಂಡಿವೆ ಆದ್ರೆ ಪರೀಕ್ಷೆಗೆ ಹೋಗಲು ಮಕ್ಕಳು ಹರಸಾಹಸ ಪಡುವ ಬಗ್ಗೆ ಯಾರೊಬ್ಬರೂ ಯೋಚಿಸದಿರುವುದು ವಿಷಾದನೀಯ.ಕುಂದಗೋಳ ತಾಲೂಕಿನಲ್ಲಿ ವಿದ್ಯಾರ್ಥಿಗಳು ಬಸ್ ವ್ಯವಸ್ಥೆ ಇಲ್ಲದ್ದಕ್ಕೆ ಚಕ್ಕಡಿ ಕಟ್ಟಿಕೊಂಡು ಪರೀಕ್ಷೆಗೆ ಹೋಗಿರುವುದು ಇಂದಿನ ವ್ಯವಸ್ಥೆಗೆ ಹಿಡಿದ ಕನ್ನಡಿಯಂತಿದೆ.

ಕುಂದಗೋಳ ತಾಲೂಕಿನ ಯರಗುಪ್ಪಿಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ರೊಟ್ಟಿಗವಾಡ ಪರೀಕ್ಷಾ ಕೇಂದ್ರಕ್ಕೆ ಚಕ್ಕಡಿ ಕಟ್ಟಿಕೊಂಡು ಹೋಗಿ ಪರೀಕ್ಷೆ ಬರೆದಿದ್ದಾರೆ. ಈ ಮೂಲಕ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ದ ತಮ್ಮದೇ ರೀತಿಯಲ್ಲಿ ವ್ಯಂಗ್ಯವಾಡಿದ್ದಾರೆ.

ಮಳೆಗಾಲದಲ್ಲಿಯೇ ಪರೀಕ್ಷೆ ಮಾಡಲು ಸರ್ಕಾರ ಏನೋ ನಿರ್ಧಾರ ಕೈಗೊಂಡಿದೆ. ಆದರೆ ಸರಿಯಾದ ಸಾರಿಗೆ ವ್ಯವಸ್ಥೆ ಮಾಡದೇ ಬೇಕಾಬಿಟ್ಟಿಯಾಗಿ ಮಕ್ಕಳ ಭವಿಷ್ಯದ ಬಗ್ಗೆ ನಿಷ್ಕಾಳಜಿ ತೋರುತ್ತಿರುವ ಸರ್ಕಾರದ ವಿರುದ್ಧ ಸಾರ್ವಜನಿಕರು ಹಿಡಿಶಾಪ ಹಾಕಿದ್ದಾರೆ. ಇನ್ನಾದರೂ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಮುಂದಿನ ಪರೀಕ್ಷೆಗೆ ಬಸ್ ಸೌಲಭ್ಯ ಕಲ್ಪಿಸಬೇಕಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply