ಹುಬ್ಬಳ್ಳಿ- ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು ರೈತರು ಕೃಷಿ ಚಟುವಟಿಕೆಗಳು ಪ್ರಾರಂಭಿಸಿದ್ದಾರೆ . ಲಾಕ್‌ಡೌನ್ ನಿಯಮಗಳಿಂದ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆ ಇಲ್ಲ. ಜಿಲ್ಲೆಯಲ್ಲಿ 27 ಕೇಂದ್ರಗಳಲ್ಲಿ ಬಿತ್ತನೆ ಬೀಜ ವಿತರಣೆ ಮಾಡಲಾಗುವುದು. ಅಗತ್ಯ ಎನಿಸಿದರೆ ಹೆಚ್ಚುವರಿ ಬೀಜ ವಿತರಣೆ ಕೇಂದ್ರಗಳನ್ನು ಸಹ ಸ್ಥಾಪಿಸಲಾಗುವುದು ಎಂದು ಬೃಹತ್ ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿ ಇಂದಿರಾ ಗಾಜಿನ ಮನೆಯಲ್ಲಿ ಮುಂಗಾರು ಹಂಗಾಮಿನ ಸಿದ್ದತೆ ಕುರಿತು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಹಾಗೂ ಜಿ.ಪಂ.ಸಿ.ಇ. ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಠಿಣ ಕೋವಿಡ್ ಲಾಕ್‌ಡೌನ್ ನಡುವೆ ಕೃಷಿ ಚಟುವಟಿಕೆಗಳಲ್ಲಿ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಸಭೆ ಕರೆಯಲಾಗಿದೆ. ರೈತರು ಹೊಲಗಳನ್ನು ಹದ ಮಾಡಿಕೊಂಡು ಇಟ್ಟಿದ್ದಾರೆ. ನಾಳೆಯಿಂದ (ಮೇ.25) ಬಿತ್ತನೆ ಬೀಜ ವಿತರಿಸಲಾಗುವುದು. ರೈತರು ಹುಬ್ಬಳ್ಳಿ ಧಾರವಾಡ ಮಹಾನಗರಕ್ಕೆ ಬೀಜ ಗೊಬ್ಬರ, ಔಷಧಗಳನ್ನು ಕೊಳ್ಳಲು ಬರುತ್ತಾರೆ. ‌ಇವರಿಗೆ ಸಮಯದಲ್ಲಿ ವಿನಾಯಿತಿ ನೀಡಲಾಗುವುದು. ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ನಿಯಮ ರೂಪಿಸಲಾಗುವುದು ಎಂದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply