ಬೆಳಗಾವಿ- ನಾಳೆಯಿಂದ ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆಯಲ್ಲಿ, ಪರ್ಯಾಯ ಸಾರಿಗೆ ಸೌಲಭ್ಯ ಒದಗಿಸಲು ಬೆಳಗಾವಿ ಜಿಲ್ಲಾಡಳಿತ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ  ಸಾರಿಗೆ ಬಸ್ ಗಳ ಬದಲಿಗೆ ಖಾಸಗಿ ಬಸ್ ಗಳನ್ನು ರಸ್ತೆಗೆ ಇಳಿಸಲು ಜಿಲ್ಲಾಡಳಿತ ಮು‌ದಾಗುದೆ. ಈ ಕುರಿತು ಬೆಳಗಾವಿ ಡಿಸಿ ಡಾ.ಕೆ.ಹರೀಶ್‌ಕುಮಾರ್ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಸಾರ್ವಜನಿಕರಿಗೆ ತೊಂದರೆ ಆಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಸಾರಿಗೆ ಸಂಸ್ಥೆಯ ಸಾರಿಗೆ ಮಾರ್ಗಗಳಲ್ಲಿ ಬಸ್ ಸೌಲಭ್ಯ ಕಲ್ಪಿಸಲು ಬಯಸುವವರಿಗೆ ತಾತ್ಕಾಲಿಕ ಪರವಾನಿಗೆ ನೀಡಲಾಗುವುದು ಸಾರಿಗೆ ನೌಕರರ ಮುಷ್ಕರ ದುರ್ಬಳಕೆ ಮಾಡಿ ಸಾರ್ವಜನಿಕರಿಂದ ಹೆಚ್ಚಿನ ಗಣ ವಸೂಲಿ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮದ ಎಚ್ಚರಿಕೆ ಸಹ ನೀಡಲಾಗಿದೆ. ಇನ್ನೂ ನಿಗದಿತ ಸಾರಿಗೆ ಮಾರ್ಗಗಳಲ್ಲಿ ಸಂಚರಿಸಲು ಮುಂದಾಗುವ ಸಾರಿಗೆ ಸಂಸ್ಥೆಯ ಬಸ್‌ಗಳಿಗೆ ಪೊಲೀಸ್ ಭದ್ರತೆ ನೀಡಲಾಗುವುದು, ಹಾಗೂ ಅವಶ್ಯಕತೆ ಕಂಡು ಬಂದ್ರೆ ಖಾಸಗಿ ಬಸ್‌ಗಳಿಗೂ ಪೊಲೀಸ್ ಭದ್ರತೆ ಕೊಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply