ಮಂಗಳೂರು  – ಮಂಗಳೂರು ವಿಮಾನ ದುರಂತ ಸಂಭವಿಸಿ ಇಂದಿಗೆ 11 ವರ್ಷ ತುಂಬಿತು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಮಂಗಳೂರು ನಗರದ ಕೂಳೂರು ತಣ್ಣೀರು ಬಾವಿ ಬಳಿಯ ಉದ್ಯಾನವನದಲ್ಲಿ  ಜಿಲ್ಲಾಡಳಿತದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು, ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಹಲವರು ಪುಷ್ಪಾಂಜಲಿಯ ನಮನ ಸಲ್ಲಿಸಿದರು. 2010 ರಲ್ಲಿ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ವಿಮಾನದಲ್ಲಿದ್ದ 166 ಮಂದಿ ಪ್ರಯಾಣಿಕರಲ್ಲಿ 158 ಮಂದಿ ಮೃತಪಟ್ಟಿದ್ದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply