ನಾಳೆಯಿಂದ ಸಾರಿಗೆ ಬಸ್ ಸಂಚಾರ ಆರಂಭಕ್ಕೆ ಸಿದ್ದತೆ.

0

ರಾಯಚೂರು –

ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸ್ಥಗಿತವಾಗಿದ ಸರ್ಕಾರಿ ಸಾರಿಗೆ ಬಸ್ ಸಂಚಾರ ನಾಳೆಯಿಂದ ಆರಂಭವಾಗಲಿದ್ದು, ರಾಯಚೂರು ಜಿಲ್ಲೆಯ ಅಗತ್ಯ ಸಿದ್ದತೆ ಕೈಗೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಆದೇಶದ ಮೆರೆಗೆ ಅಂತರ ತಾಲೂಕು, ಅಂತರ ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭವಾಗಲಿದೆ. ಹೀಗಾಗಿ ಬಸ್ ಗಳನ್ನ ಸ್ವಚ್ಚಗೊಳಿಸಿ, ಸ್ಯಾನಿಟೈಜೆಷನ್ ಮಾಡಲಾಗುತ್ತಿದೆ. ಬಸ್ ನಲ್ಲಿ ಸೀಟುಗಳ ಪೈಕ್ ಶೇ.೫೦ರಷ್ಟು ಪ್ರಯಾಣಿಕರಿಗೆ ಅನುಮತಿ ನೀಡಿರುವ ಕಾರಣ ಬಸ್ ‌ನಲ್ಲಿ ಮಾರ್ಕ್ ಮಾಡಲಾಗುತ್ತಿದೆ. ಕೆಲಸಕ್ಕೆ ಹಾಜರಾಗುವ ಚಾಲಕರಿಗೆ, ನಿರ್ವಾಹಕರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡು ಬರಲು ತಿಳಿಸಲಾಗಿದೆ.

 

ಬಸ್ ಸಂಚಾರಿಸುವ ಸರ್ಕಾರದ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕಾಗಿದ್ದು, ಪ್ರಯಾಣಿಕರು, ಚಾಲಕರು, ನಿರ್ವಾಹಕರು ಮಾಸ್ಕ್ ಧರಿಸುವುದು, ಸ್ಯಾನಿಟೈಜರ್ ಉಪಯೋಗಿಸಬೇಕು ಜತೆಯಲ್ಲಿ ಮಾಸ್ಕ್ ಧರಿಸದೆ ಬಂದಿರುವ ಪ್ರಯಾಣಿಕರಿಗೆ ಮಾಸ್ಕ್ ನೀಡುವ ಕುರಿತು ಚಿಂತನೆ ನಡೆದಿದೆ ಎನ್ನುತ್ತಾರೆ ರಾಯಚೂರಿನ ೨ನೇ ಬಸ್ ಡಿಪೋದ ‌ಹಿರಿಯ ಘಟನ ವ್ಯವಸ್ಥಾಪಕ ಹೊಸಮಲ್ಲಿ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply