16 ಜಿಲ್ಲೆಗಳಲ್ಲಿ ಮಾತ್ರ ಅನ್ ಲಾಕ್, ಯಾವೆಲ್ಲಾ ಜಿಲ್ಲೆಗಳು ಅನ್ ಲಾಕ್…!

0

ಬೆಂಗಳೂರು –

ಕರೋನ ಸೋಂಕು ಇಳಿಕೆ ಕಂಡ ಹಿನ್ನಲಯಲ್ಲಿ ಇಂದು ಸಿ ಎಮ್ ಹತ್ವದ ನಿರ್ಧಾರ ಕೈಗೊಂಡಿದ್ದು. ತಜ್ಝರ ಸಲಹೆ ಹಿನ್ನಲಯಲ್ಲಿ ಶೇಕಡಾ ೫ಕ್ಕಿಂತ ಕಡಿಮೆ ಇರುವ 16 ಜಿಲ್ಲೆಗಳಲ್ಲಿ ಮಾತ್ರ ಅನ್ ಲಾಕ್ ಮಾಡಿ ಸಿ ಎಮ್ ಆಧೇಶ ಮಾಡಿದ್ದಾರೆ. ಕಳೆದ ಒಂದು ವಾರದಲ್ಲಿ ಹದಿನಾರು ಜಿಲ್ಲೆಗಳಲ್ಲಿ ಶೇ.5 ಪಾಸಿಟಿವಿಟಿ ಇದೆ. ಹೀಗಾಗಿ ಉ.ಕನ್ನಡ, ಬೆಳಗಾವಿ, ಮಂಡ್ಯ, ಚಿಕ್ಕಮಗಳೂರು ಚಿಕ್ಕಬಳ್ಳಾಪುರ, ಗದಗ, ರಾಯಚೂರು, ಕಲಬುರಗಿ, ಬೀದರ್, ಬೆಂಗಳೂರು, ಯಾದಗಿರಿ ಸೇರಿದಂತೆ  16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಿ ಆದೆಶ ಮಾಡಿದ್ದಾರೆ. ಅನ್ ಲಾಕ್ ಇರುವ ಜಿಲ್ಲೆಯಲ್ಲಿ  ಎಲ್ಲ ಅಂಗಡಿಗಳಿಗೆ ಬೆಳಗ್ಗೆ 6 ಸಂಜೆ 5 ರವರೆಗೆ ಅನುಮತಿ ನೀಡಿದ್ದು, ಹೊಟೇಲ್ ಗಳಲ್ಲಿ ಡೈನಿಂಗ್ (ಕುಳಿತು ಊಟ ಮಾಡಲು ಅವಕಾಶ) ಸಂಜೆ 5 ರವರೆಗೆ. ಶೇ. 50 ಮಿತಿ ನಿಡಲಾಗಿದೆ. ಇನ್ನು ಬಸ್ ಸಂಚಾರಕ್ಕೆ ವಕಾಶ ನಿಡಿದ್ದು ಮೆಟ್ರೋ ಶೇ.50 ಅನುಮತಿ,  ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಶೆ. 50 ಲಾಡ್ಜ್, ರೆಸಾರ್ಟ್, ಜಿಂ ಗಳಲ್ಲಿ ಶೇ.50 ಭರ್ತಿ ಮಾಡಬಹುದಾಗಿದೆ. ಇನ್ನು ಶೇ.5 ಕ್ಕಿಂತ ಹೆಚ್ಚು ಸೋಂಕಿರುವ 13 ಜಿಲ್ಲೆಗಳಲ್ಲಿ ಈ ಹಿಂದಿನ ಸಡಿಲಿಕೆಗಳು ಮುಂದುವರಿಕೆ, ಪಾಸಿಟಿವಿಟ್ ರೇಟ್ ಕಡಿಮೆ ಆಗದ ಹಿನ್ನಲಯಲ್ಲಿ ಮೈಸೂರಿನಲ್ಲಿ ಲಾಕ್ಡೌನ್ ಮುಂದುವರಿಕೆ ಮಾಡಲು ನಿರ್ಧಾರ ಮಾಡಲಾಗಿದೆ. ಈಜುಕೊಳ, ಸಿನಿಮಾ ಮಂದಿರ, ಧಾರ್ಮಿಕ ಕೇಂದ್ರಗಳು, ಮಾಲ್ ಗಳು, ಸಭೆ ಸಮಾರಂಭಗಳಿಗೆ ಅವಕಾಶ ನಿಡಿಲ್ಲಾ….

ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ < 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ. ಈ ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ.

ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ  ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.

*ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.

*ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) *ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ  ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.

*ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.

*ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.

*ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.

*ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.

*ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.

*ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.  ಶೇ. 10 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.

ರಾಜ್ಯವ್ಯಾಪಿ ಅನ್ವಯವಾಗುವಂತೆ:

ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಬಸ್‌ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply