ಹಾವೇರಿ – ರಾಜ್ಯದಲ್ಲಿ ಯಾವಾಗ ಏನು ಬೇಕಾದ್ರೂ ಆಗಬಹುದು. ಯಡಿಯೂರಪ್ಪ ಸಿಎಂ ಇರೋವರೆಗೂ ನಾನೂ ಮಂತ್ರಿ ಆಗೋದಿಲ್ಲ. ನಾನು ಸಚಿವ ಸ್ಥಾನ ಕೇಳಿಲ್ಲ. ಯಾವ್ಯಾವ ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕಿಲ್ಲ, ಅಂತಹ ಕಡೆಗಳಲ್ಲಿ ಸಚಿವ ಸ್ಥಾನ ನೀಡುವಂತೆ ಹೇಳಿದ್ದೇನೆ. ಸಚಿವ ಸ್ಥಾನ ಕೊಟ್ಟರೂ ತೆಗೆದುಕೊಳ್ಳೋದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿ ಕಾರಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು  ಸಿಡಿ ಬಗ್ಗೆ ನಾನು ಹೇಳಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದರು.ಅದನ್ನ ನಾನು ಹೇಳಿದ್ದೇನೆ.

ನಾನು ಶರಣರ‌ ವಚನಗಳ ಸಿಡಿ ನೋಡುತ್ತೇನೆ. ಅಂತಹ ಸಿಡಿ ನೋಡೋದಿಲ್ಲ ಎಂದರು. ಸದ್ಯ ಈಗ ಮೋದಿಯವರ ಗಾಳಿ ಇದೆ. ವಲಸಿಗ ಶಾಸಕರು ಮೋದಿಯವರಿಗೆ ಜೈ ಅಂತಿದ್ದಾರೆ. ನಾಳೆ ಗಾಳಿ ಬೇರೆಯಾದರೆ ಸೋನಿಯಾಕಿ ಜೈ ಅಂತಾರೆ. ದೇವೇಗೌಡ ಅಪ್ಪಾಜಿ ಅಂತಾರೆ. ವಲಸಿಗ ಶಾಸಕರು ಈಗ ಮೂಲ ಬಿಜೆಪಿ‌ ಶಾಸಕರ ಬಗ್ಗೆ ಮಾತನಾಡ್ತಿದ್ದಾರೆ ಎಂದರು. ಇನ್ನು ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ಅಲ್ಲ, ಅವರು ಉಪಾದ್ಯಾಪಿ ಠಾಕ್ರಿ. ಚುನಾವಣಾ ಸ್ಟಂಟ್ ಗಾಗಿ ಏನೇನೋ ಮಾತಾಡ್ತಾರೆ. ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಬಹಳ ಆಪ್ತರಿದ್ದಾರೆ. ಹೀಗಾಗಿ ಯಡಿಯೂರಪ್ಪ ಯಾವಾಗ ಸಿಎಂ ಸ್ಥಾನದಿಂದ ಇಳಿಯುತ್ತಾರೆ ಎಂಬುದು ಅವರಿಗೆ ಗೊತ್ತಿದೆ. ಯಡಿಯೂರಪ್ಪ, ಜಾರ್ಜ್, ಜಮೀರ ಅಹಮ್ಮದ ಖಾನ ಎಲ್ಲರೂ ಬಹಳ ಆಪ್ತರು. ಅಮೀತ್ ಷಾ ಎರಡೂವರೆ ವರ್ಷ ಬಿಜೆಪಿ ಸರಕಾರ ಇರುತ್ತದೆ ಅಂದಿದ್ದಾರೆ.ಯಡಿಯೂರಪ್ಪ ಎರಡೂವರೆ ವರ್ಷ ಸಿಎಂ ಆಗಿರ್ತಾರೆ ಅಂತಾ ಹೇಳಿಲ್ಲ ಎಂದು ಶಾಸಕ ಬಸನಗೌಡ ಯತ್ನಾಳ ಹೇಳಿದ್ದಾರೆ.

About Author

Priya Bot

Leave A Reply