ಮಸೀದಿ, ಮದರಸಾಗಳಿಗೆ ಭತ್ಯೆ ನೀಡುವುದಕ್ಕೆ ವಿ ಎಚ್ ಪಿ ವಿರೋಧ

0

ಮಂಗಳೂರು  – ರಾಜ್ಯದಲ್ಲಿ ಕೋವಿಡ್ 19 ಸೋಂಕಿನಿಂದಾಗಿ ಅರ್ಚಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕಾರಣ ಸರಕಾರದಿಂದ ತಸ್ತಿಕ್ ಭತ್ಯೆ ನೀಡಲು ಆದೇಶಿಸಿದ್ದನ್ನು ವಿಶ್ವ ಹಿಂದು ಪರಿಷತ್ ಸ್ವಾಗತಿಸುತ್ತದೆ. ಆದರೆ ಅದೇ ಆದೇಶದ ಪ್ರಕಾರ ತಸ್ತಿಕ್ ಹಣವನ್ನು ಹಿಂದು ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣಕನ್ನಡ ಜಿಲ್ಲೆಯ 41 ಮಸೀದಿ, ಮದರಸದ ಮೌಲ್ವಿಗಳಿಗೆ ನೀಡಲು ನಿರ್ಧರಿಸಿದ್ದನ್ನು ವಿಶ್ವ ಹಿಂದು ಪರಿಷದ್ ವಿರೋಧಿಸುತ್ತದೆ.

ದೈವಸ್ಥಾನ, ದೇವಸ್ಥಾನದ ಹಣವನ್ನು ಹಿಂದುಗಳಿಗೆ ಮತ್ತು ದೇವಸ್ಥಾನದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು ವಿನಹ ಮಸೀದಿ ಮದರಸಗಳಿಗೆ ಉಪಯೋಗಿಸುವುದನ್ನು ಖಂಡಿಸುತ್ತೇವೆ. ತಕ್ಷಣ ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ವಿಶ್ವ ಹಿಂದು‌ ಪರಿಷದ್ ನಾಯಕರಾದ , ವಿಹಿಂಪ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ , ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್, ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಪತ್ರಿಕಾ ಪ್ರಕಟಣೆ ಮೂಲಕ ಹೇಳಿಕೆ ನೀಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply