ಮೈಸೂರು- ಮೈಸೂರು ವಿ.ವಿ.ಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ ಯಾದಗಿರಿ ಜಿಲ್ಲೆಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈಸೂರಿನ ಮಾನಸಗಂಗೋತ್ರಿ ಪುರುಷರ ವಿದ್ಯಾರ್ಥಿ ನಿಲಯದ  ಕೊಠಡಿಯಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಸಿದ್ದರಾಮೇಶ್ವರ (24) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ರಾತ್ರಿ ಮೇಳೆಯಲ್ಲಿ ಕೊಠಡಿಯಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.

ಈತ ವಿ.ವಿ.ಯ ಸಮಾಜಶಾಸ್ತ್ರ ವಿಷಯದಲ್ಲಿ ಅಧ್ಯಯನ ಮಾಡುತ್ತಿದ್ದು, ವಿದ್ಯಾರ್ಥಿಯ  ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಭಂದ  ಜಯಲಕ್ಷ್ಮಿ ಪುರ  ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

 

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply