ಬೆಂಗಳೂರು –

ಬಹು ನಿರೀಕ್ಷಿತ ಬಜೆಟ್ ಮಂಡನೆಯಾಗಿದ್ದು, ಈ ವರ್ಷದ ಬಜೆಟ್ ನಲ್ಲಿ ಮಹಿಳೆಯರು ಬಂಪರ್ ಗಿಫ್ಟ್ ನೀಡಲಾಗಿದೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಬಜೆಟ್‌ ಮಂಡಿಸಿದ ಸಿಎಮ್  ಮಹಿಳೆಯರಿಗೆ ಈ ವರ್ಷದ ಬಜೆಟ್ ನಲ್ಲಿ  ಬಂಪರ್‌ ಯೋಜನೆಗಳನ್ನ ಪ್ರಕಟಿಸಿದ್ದಾರೆ. ಶೇಖಡಾ 4 ರೂಪಾಯಿ ಬಡ್ಡಿ ದರದಲ್ಲಿ ಸಂಜೀವಿನಿ ಯೋಜನೆಯ ಅಡಿ ಮಹಿಳಾ ಸ್ವಸಹಾಯ ಸಂಘಗಳಿಗೆ 60 ಸಾವಿರ ಮಹಿಳೆಯರಿಗೆ ಸ್ವಯಂ ಉದ್ಯೋಗದ ಅವಕಾಶ ನೀಡಲಾಗಿದೆ‌ ಇದರಿಂದಾಗಿ ಮಹಿಳೆಯರು ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಮಹಿಳೆಯರ ಗೃಹ ಉದ್ಯಮಕ್ಕೆ ಒತ್ತು ನೀಡಲಾಗಿದ್ದು, ಮಹಿಳೆಯರು ತಯಾರಿಸುವ ಸಣ್ಣ ಸಣ್ಣ ಆಹಾರ ಪದಾರ್ಥಗಳ ಮಾರುಕಟ್ಟೆ ಸೌಲಭ್ಯ ಒದಗಿಸಲು ಒತ್ತು ನೀಡಲಾಗಿದೆ.

ಪ್ರತಿ ಜಿಲ್ಲೆಯ ಉದ್ಯೋಗಸ್ಥ ಮಹಿಳೆಯರ ಮಕ್ಕಳ ಪಾಲನೆಗೆ ಜಿಲ್ಲಾ ಮಟ್ಟದಲ್ಲಿ ನೂತನ  2 ಶಿಶುಪಾಲನಾ ಕೇಂದ್ರ ಸ್ಥಾಪನೆ ಮಾಡಲಾಗುವುದು.
ಗಾರ್ಮೆಂಟ್ಸ್ ಕಾರ್ಮಿಕರಿಗೆ ಉಚಿತ ಬಸ್ ಪಾಸ್, ಎಲ್ಲಾ ಪೊಲೀಸ್ ಠಾಣೆಗಳಲ್ಲಿ ನಿರ್ಭಯ ಸಹಾಯ ಕೇಂದ್ರ ತರೆಯಲು ಯೋಜನೆ ರೂಪಿಸಲಾಗಿದೆ. ಮಹಿಳಾ ಸುರಕ್ಷತೆಗೆ ಬೆಂಗಳೂರ ನಗರದಲ್ಲಿ  7.500 ಸಿಸಿಟಿವಿ ಅಳವಡಿಕೆ,ಮಹಿಳಾ ಸುರಕ್ಷತೆಗೆ ಇ-ಬೀಟ್ ವ್ಯವಸ್ಥೆ ಜಾರಿ ಮಾಡಲಾಗುವದು. ಸದ್ಯದಲ್ಲಿ ಇರುವ ಮಹಿಳಾ ಸರ್ಕಾರಿ ನೌಕರರಿಗೆ ಚಾಲ್ತಿಯಲ್ಲಿರುವ ಪ್ರಸೂತಿ ರಜೆ 6 ತಿಂಗಳು ಜೊತೆಗೆ ಸೇವಾವಧಿಯಲ್ಲಿ ಜೊತೆಯಲ್ಲಿ 6 ತಿಂಗಳು ಮಕ್ಕಳ ಆರೈಕೆ ರಜೆ ನೀಡಲಾಗಿದೆ.

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply