ಚಿಕ್ಕಮಗಳೂರು- ಗ್ರಾಮ ಪಂಚಾಯತಿ ಸಿಬ್ಬಂದಿ ಗ್ರಾಮ ಪಂಚಾಯತಿ ಕಚೇರಿಯಲ್ಲಿಯೇ ಭರ್ಜರಿ ಎಣ್ಣೆ ಪಾರ್ಟಿಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ದೇವನೂರು ಗ್ರಾಮ ಪಂಚಾಯಿತಿಯಲ್ಲಿ  ಈ ಘಟನೆ ನಡೆದಿದೆ.

ನಿನ್ನೆ ಭಾನುವಾರವಾದ್ದರಿಂದ ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳಾದ ವಾಟರ್ ಮ್ಯಾನ್ ಅರುಣ್ ಹಾಗೂ ಅಟೆಂಡರ್ ಅವಿನಾಶ್ ಗ್ರಾಮ ಪಂಚಾಯಿತಿಯಲ್ಲೇ ಸಂಡೇ ಸ್ಪೆಷಲ್ ಡ್ರಿಂಕ್ಸ್ ಪಾರ್ಟಿ ಮಾಡಿದ್ದಾರೆ. ಪಾರ್ಟಿಯ ಬಳಿಕ ಫುಲ್ ಟೈಟ್ ಆದ ಇಬ್ಬರೂ ಗ್ರಾಮ ಮನೆಗೆ ಹೋಗಲು  ಸಾಧ್ಯವಾಗದ ಹಿನ್ನೆಲೆಯಲ್ಲಿ ಎಲ್ಲಂದರಲ್ಲಿ ಕಚೇರಿಯಲ್ಲಿ ಬಿದ್ದು ಒದ್ದಾಡಿದ್ದಾರೆ. ರಾತ್ರಿ 11 ಗಂಟೆಯಾದರೂ ಗ್ರಾಮ ಪಂಚಾಯಿತಿ ಬಾಗಿಲು ಹಾಕಿಲ್ಲಾ . ಹೀಗಾಗಿ ಪಂಚಾಯತಿ ಬಳಿ ಬಂದ ಜನ ನೋಡಿದ್ದಾರೆ. ಇವರ ಭರ್ಜರಿ ಪಾರ್ಟಿ ಮಾಡಿರುವುದು ಬೆಳಕಿಗೆ ಬಂದಿದೆ‌, ಇದನ್ನು ಕಂಡ ಸ್ಥಳಿಯರೇ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿದ್ದಾರೆ. ವಿಷಯವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಇಬ್ಬರನ್ನೂ ಕೆಲಸದಿಂದ ವಜಾಗಿಳಿಸುವಂತೆ ಆಗ್ರಹಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

 

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply