ಬೆಂಗಳೂರು- ರಾಜ್ಯ ಸರ್ಕಾರದ ಬಜೆಟ್ ಮಂಡನೆಯಾಗಿದ್ದು, ಕರೋನಾ ಮಹಾ ಮಾರಿ ದಾಳಿ  ಬಳಿಕ ಸರ್ಕಾರ ಮಂಡಿಸಿದ ಮೊದಲ ಬಜೆಟ್ ಇದಾಗಿದೆ. ಸಾಮಾನ್ಯವಾಗಿ ಜನರಲ್ಲಿ ಸಾಕಷ್ಟು ಕುತೂಹಲ ಇದ್ದು ನಮ್ಮ ಜಿಲ್ಲೆಗೆ ಏನು ಸಿಕ್ಕಿದೆ ಎಂದು ಜನರಲ್ಲಿ ಸಾಕಷ್ಟು ನಿರೀಕ್ಷೆ ಇದ್ದೇ ಇರುತ್ತದೆ. ಆದ್ರೆ ನೂತನವಾಗಿ ಜಿಲ್ಲೆ ಘೋಷಣೆಯಾದ ವಿಜಯನಗರ ಜಿಲ್ಲೆಗೆ ಈ ವರ್ಷದ ಬಜೆಟ್ ನಲ್ಲಿ ಸಾಕಷ್ಟು ಹಣ ಬಿಡುಗಡೆ ಆಗಲಿದೆ ಎಂದು ಜನ ನಿರೀಕ್ಷೆ ಇಟ್ಟಿದ್ದರು.

ಆದ್ರೆ ನೂತನ ಜಿಲ್ಲೆಗೆ ಒಂದೇ ಒಂದು ಹೊಸ ಯೋಜನೆ ಸಹ ಘೋಷಣೆಯಾಗಿಲ್ಲಾ. ಇನ್ನು ಬಳ್ಳಾರಿ ಜಿಲ್ಲೆಗೆ ಹೋಲಿಕೆ ಮಾಡಿಕೊಂಡರೆ ಬಳ್ಳಾರಿಯಲ್ಲಿ ಒಂದು ಟ್ರೋಮಾ ಕೇರ್ ಸೆಂಟರ್ ಹಾಗೂ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ನೂತನ ಮೆಣಸಿನಕಾಯಿ ಮಾರುಕಟ್ಟೆ ನಿರ್ಮಾಣ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮ ಮಂಡಳಿಗೆ 1500 ಕೋಟಿ ನೀಡಲಾಗಿದೆ. ಇನ್ನು ವಿಜಯನಗರ ಜಿಲ್ಲೆಗೆ ಕೇವಲ ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮ ಮಂಡಳಿಗೆ ಹಣ ಬಿಡುಗಡೆಯಿಂದ ಸಹಾಯ ಆಗಲಿದೆ ಹೊರತು ಬೇರೆ ಯಾವುದೇ ಯೋಜನೆಗಳು ಜಾರಿಯಾಗಿಲ್ಲಾ. ಹೀಗಾಗಿ ನೂತನ ವಿಜಯ ನಗರ ಜಿಲ್ಲೆಯ ಜನತೆಯ ನಿರೀಕ್ಷೆ ಹುಸಿಯಾಗಿದೆ. 

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

 

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply