ಪಿಯು ಪರೀಕ್ಷೆ ಯಾವಾಗ..?

0

ಬೆಂಗಳೂರು – ಬಿಬಿಎಂಪಿ ವ್ಯಾಪ್ತಿಯಲ್ಲಿ ಸರಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳ ವಿದ್ಯಾರ್ಥಿಗಳು, ಬೋಧಕ ಮತ್ತಿತರೆ ಸಿಬ್ಬಂದಿಗೆ ಕೋವಿಡ್‌ ಲಸಿಕೀಕರಣ ವೇಗವಾಗಿ ಸಾಗುತ್ತಿದ್ದು, ಗುರುವಾರದ (ಜೂನ್‌ 8) ಹೊತ್ತಿಗೆ 51.12% ಮಂದಿಗೆ ವ್ಯಾಕ್ಸಿನ್‌ ಕೊಡಲಾಗಿದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ಹೇಳಿಕೆ ನೀಡಿರುವ ಅವರು, ಬಿಬಿಎಂಪಿಯ ಒಟ್ಟು 8 ವಲಯಗಳಲ್ಲಿನ ಸರಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ 59179 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಈ ಪೈಕಿ 31147 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ 52.63% ಗುರಿ ತಲುಪಲಾಗಿದೆ. ಹಾಗೆಯೇ, 3076 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದು, ಈ ಪೈಕಿ 2518 ಸಿಬ್ಬಂದಿಗೆ ಲಸಿಕೆ ನೀಡಿ 81.86% ಗುರಿ ತಲುಪಲಾಗಿದೆ ಎಂದಿದ್ದಾರೆ.

ಎಂಟೂ ವಲಯಗಳಲ್ಲಿ ವಿದ್ಯಾರ್ಥಿಗಳ ಲಸಿಕೀಕರಣ ಅತ್ಯಂತ ವೇಗವಾಗಿ, ವ್ಯವಸ್ಥಿತವಾಗಿ ಸಾಗಿದ್ದು ಆದಷ್ಟು ಬೇಗ ಲಸಿಕೀಕರಣ ಮುಗಿಸಲಾಗುವುದು ಎಂದಿರುವ ಡಿಸಿಎಂ, ಈವರೆಗೂ ಲಸಿಕೆ ಪಡೆಯದ ವಿದ್ಯಾರ್ಥಿಗಳು ತಪ್ಪದೇ ತಮ್ಮ ಕಾಲೇಜುಗಳಲ್ಲಿ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply