ಮಂಗಳೂರು-ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಜೆ ಭೇಟಿ ನೀಡಿದರು. ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳದ ಹೆಲಿಪ್ಯಾಡ್‌ನಲ್ಲಿ ಬಂದಿಳಿದ ಅವರು ಖಾಸಗಿ ಭೇಟಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದಿರುವುದಾಗಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ  ಮಾಜಿ ಶಾಸಕ ಕೆ. ವಸಂತ ಬಂಗೇರ, ವಿಧಾನ ಪರಿಷತ್ ಶಾಸಕ ಕೆ ಹರೀಶ್ ಕುಮಾರ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ರಂಜನ್ ಜಿ ಗೌಡ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಭಿನಂದನ್ ಹರೀಶ್, ಮೊದಲಾದವರು ಉಪಸ್ಥಿತರಿದ್ದು, ಡಿಕೆಶಿ ಅವರನ್ನು ಸ್ವಾಗತಿಸಿದರು.

ಇದೇ ವೇಳೆ ಮಾತನಾಡಿದ ಡಿಕೆಶಿ, MRPL ನಲ್ಲಿ ಉದ್ಯೋಗ ತಾರತಮ್ಯವನ್ನು ಕಟುವಾಗಿ ಖಂಡಿಸಿದರು. ಎಂಆರ್ ಪಿಎಲ್ ಸ್ಥಾಪನೆಗೆ ಜಾಗ ನೀಡಿದ ದಕ್ಷಿಣ ಕನ್ನಡದ ಯುವಕರು ಹಾಗೂ ಕನ್ನಡಿಗರು ಉದ್ಯೋಗಕ್ಕೆ
ಎಲ್ಲಿಗೆ ಹೋಗಬೇಕು ಎಂದು ಪ್ರಶ್ನೆ‌ ಮಾಡಿದ ಅವರು,
ಸರೋಜಿನಿ ಮಹಿಷಿ ವರದಿ ಬಗ್ಗೆ ಸಂಸದ ನಳಿನ್ ಕುಮಾರ್ ಗೆ ಅರಿವಿಲ್ಲವೇ..? ಯುವಕರು ಉದ್ಯೋಗ ಕಳೆದುಕೊಂಡಿರುವ ಈ ಸಂದರ್ಭದಲ್ಲಿ MRPL ಇಲ್ಲಿಯ ಯುವಕರಿಗೆ ಉದ್ಯೋಗ ನೀಡುವ ಬದಲು ಹೊರ ರಾಜ್ಯ ದವರಿಗೆ ಉದ್ಯೋಗ ನೀಡುವುದು ನಮ್ಮ ಸ್ವಾಭಿಮಾನವನ್ನು ಕೆಣಕುವಂತಿದೆ. ಇದೇ ರೀತಿ ಮುಂದುವರೆದಲ್ಲಿ ನಾವು ಇದರ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply