ಹಾಸನ – ಕರೋನಾ ಹೆಮ್ಮಾರಿಯ ಎರಡನೇ  ಭಾರೀ ನಿಯಂತ್ರಣ ಮಾಡುವುದು ಸರ್ಕಾರಕ್ಕೆ ದೊಟ್ಡತೆಲೆನೋವಾಗಿ ಪರಿಣಮಿಸಿದೆ. ಈ ಮಧ್ಯ ದೇಶದಲ್ಲಿ ಮಾರ್ಚ್ ಒಂದರಂದು ಎರಡನೆ ಹಂತದ ಕೋವಿಡ್  ಲಸಿಕೆ ನೀಡಲು ಸರ್ಕಾರ ಮುಂದಾಗಿದೆ. ಆದ್ರೆ ಕೋವಿಡ್‌ ಲಸಿಕೆ ಪಡೆದ 20 ದಿನದ ಬಳಿಕ  ಸಿಎಸ್‌ಐ ಮಿಷನ್‌ ಆಸ್ಪತ್ರೆ ಡಿ ದರ್ಜೆ ನೌಕರ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ನೆಟ್ಟೆಕೆರೆ ಗ್ರಾಮದ ಸುರೇಶ್‌ (44) ಬೆಳಿಗ್ಗೆ ಇಂದು ಅಸ್ವಸ್ಥತೆಯಿಂದ ಬಳಲಿದ್ದು ಆತನನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದ್ರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಹೀಗಾಗಿ ಸುರೇಶ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಸುರೇಶ್ ಸಾವಿನ ಪ್ರಕರಣ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಕೋವಿಡ್‌ಲಸಿಕೆ ಪಡೆದಿದಕ್ಕೆ ಅವರ ಸಾವು ಸಂಭವಿಸಿದೆ ಎಂದು ನಂಬಲಾಗಿತ್ತು. ಆದ್ರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಹೇಳಿಕೆ ನೀಡಿದ್ದು,

ಈವರೆಗೆ ಕೋವಿಡ್‌ ಲಸಿಕೆ ಪಡೆದ ಯಾರಿಗೂ ಅಡ್ಡ ಪರಿಣಾಮ ಆಗಿಲ್ಲಾ, ಪ್ರಾಥಮಿಕ ವರದಿ ಪ್ರಕಾರ ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿರಬಹುದು. ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ ಎಂದಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply