ಬೆಂಗಳೂರು- ಮಾಜಿ ಸಚಿವ ವಿನಯ್ ಕುಲಕರ್ಣಿ ಪತ್ನಿ ಕಣ್ಣೀರು ಹಾಕಿದ್ದಾರೆ. ‌2 ಎ ಮೀಸಲಾತಿ ವಿಚಾರವಾಗಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಭಾಗಿಯಾದ ವಿನಯ್ ಕುಲಕರ್ಣಿಯವರ ಪತ್ನಿ ಶಿವಲೀಲಾ ಅವರು ಕಣ್ಣೀರು ಹಾಕಿದ್ದಾರೆ. ‌ಲಿಂಗಾಯತ ಪಂಚಮಸಾಲಿ ಸಮುದಾಯ ನಡೆಸಿತ್ತಿರುವ ಸಮಾವೇಶದಲ್ಲಿ ಶಿವಲೀಲಾ ಅವರು ಭಾಗಿಯಾಗಿದ್ದರು. ಈ ವೇಳೆ ಮೇದಿಕೆ‌ ಮುಂಭಾಗದಲ್ಲಿ ಕುಳಿತ ಅವರನ್ನು ವೇದಿಕೆಯ ಮೇಲೆ ಕರೆತಂದ್ರು. ಈ ವೇಳೆಯಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡುವಂತೆ‌ ಮನವಿ ಮಾಡಿದ್ರು, ಆಗ ಅವರು ಮಾತನಾಡಲು ನಿರಾಕರಿಸಿ ಕಣ್ಣೀರು ಹಾಕಿದ್ದಾರೆ. ಆಗ ಅಲ್ಲೇ ಇದ್ದ ವಚನಾನಂದ ಶ್ರೀಗಳು ಮಾತನಾಡಿ, 2016 ರಲ್ಲಿ ನಡೆದ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಅವರು ಆರೋಪಿಯಾಗಿದ್ದಾರೆ. ಆದ್ರೆ ಅವರು ಆರೋಪಿ ಮಾತ್ರ ಅಪರಾಧಿ ಅಲ್ಲಾ , ನಮ್ಮ ಸಮುದಾಯದ ದೊಡ್ಡ ಶಕ್ತಿ ಅವರು, ಅವರ ಕುಟುಂಬದ ಜೊತೆ ನಾವಿದ್ದೇವೆ ಎಂದು ಧೈರ್ಯ ಹೇಳಿದರು.

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply