ಮನೆ ಗೋಡೆ ಕುಸಿದ ಮಹಿಳೆ ಸಾವು ..!

0

ಕಾರವಾರ

ಅಬ್ಬರದ ಮಳೆಗೆ ಮನೆಯ ಮಣ್ಣಿನ ಗೋಡೆ ಕುಸಿದು ಮಹಿಳೆ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪುರ ಗ್ರಾಮಪಂಚಾಯ್ತಿ ವ್ಯಾಪ್ತಿಯ ಮುಂಡಿಗೆಹಳ್ಳಿಯಲ್ಲಿ  ನಿನ್ನೆ ಸಂಜೆ ನಡೆದಿದೆ.

ಯಶೋದಾ ಬಂಗಾರ್ಯ ಗೌಡ(31) ಮನೆ ಗೋಡೆ ಕುಸಿದು ಮೃತಪಟ್ಟ ಮಹಿಳೆಯಾಗಿದ್ದಾಳೆ. ಸತತ ಮಳೆಯಿಂದ ಮನೆಯ  ಗೋಡೆ ಕುಸಿದು ಈಕೆಯ ಮೇಲೆ ಬಿದ್ದಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಇನ್ನು ಮೃತ ಕುಟುಂಬಕ್ಕೆ ತಕ್ಷಣದಲ್ಲಿ ಐದು ಲಕ್ಷ ಪರಿಹಾರ ನೀಡುವ ಭರವಸೆ ನೀಡಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply