ಬೆಂಗಳೂರು- ಪಂಚಮಸಾಲಿ ಮೀಸಲಾತಿ ಹೋರಾಟ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತಿಲ್ಲಾ. ಇಂದು ತಮ್ಮ ಪಕ್ಷದ  ಸಿ ಎಮ್ ವಿರುದ್ಧ, ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧ ಸಿಡಿದೆದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತಿನಲ್ಲೇ ತಿವಿದಿದ್ದಾರೆ. ಇದನೆಲ್ಲಾ ಗಮನಿಸಿದ ಸಿ ಎಮ್ ಕೈ ಕಟ್ಟಿ ಕುಳಿತಿಲ್ಲಾ ಬದಲಿಗೆ ಯತ್ನಾಳ ಅವರ ಬಾಯಿ ಮುಚ್ಚಿಸುವ ಹೊಸ ಪ್ಲ್ಯಾನ್ ಮಾಡಿದ್ದು ಯತ್ನಾಳ ವಿರುದ್ದ ಹೈಕಮಾಂಡ್ ಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಯತ್ನಾಳ  ಅವರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ಈ ಹಿನ್ನೆಲೆ ರಾತ್ರಿ 9.30ಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಕೆಲ ದಿನಗಳ ಹಿಂದೆ ಪಕ್ಷ ವಿರೋಧಿ ಹೇಳಿಕೆ ಹಿನ್ನೆಲೆ ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ಸಹ  ನೀಡಿತ್ತು. ಈ ನೋಟಿಸ್ ಗೆ ಯತ್ನಾಳ್ 25 ಪುಟಗಳ ಸುದೀರ್ಘವಾದ ಉತ್ತರ ಸಹ ನೀಡಿದ್ದರು. ಇಂದು ಪ್ರತಿಭಟನೆಯಲ್ಲಿ ಭಾಗಿ ಸರ್ಕಾರದ ವಿರುದ್ಧವೇ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ.

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply