ಗೂಗಲ್ ಮೀಟ್ ಮೂಲಕ ಮನೆಯಿಂದಲೇ ಯೋಗಾಭ್ಯಾಸ

0

ಬಳ್ಳಾರಿ-

ಬಳ್ಳಾರಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆಯುಷ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜೂ.21ರಂದು ಗೂಗಲ್ ಮೀಟ್ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದ್ದು, ಜಿಲ್ಲೆಯ ಎಲ್ಲ ನಾಗರಿಕರು ಮನೆಯಿಂದಲೇ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಕೋವಿಡ್ ಕಾರಣದಿಂದ ಸಾರ್ವಜನಿಕ ಸಭೆ ಸಮಾರಂಭಗಳನ್ನು ಆಯೋಜಿಸುವುದನ್ನು ನಿಷೇಧಿಸಿರುವುದರಿಂದ ಮನೆಯಿಂದಲೇ ಯೋಗ ಎಂಬ ಘೋಷ ವಾಕ್ಯದೊಂದಿಗೆ ಜೂ.21 ರಂದು 7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಸಾರ್ವಜನಿಕರು  meet.google.com/vnx-dgwg-bvy  ಲಿಂಕ್ ಮೂಲಕ ಲಾಗಿನ್ ಆಗಿ ಪ್ರತಿ ದಿನ ಬೆಳಗ್ಗೆ 6 ರಿಂದ 7 ರವರೆಗೆ ಯೋಗಾಭ್ಯಾಸದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನ ಆಚರಿಸಲು ಭಾರತ ಸರ್ಕಾರದ ಆಯುಷ್ ಮಂತ್ರಾಲಯವು ಸೂಚಿಸಿದೆ. ಹೀಗಾಗಿ ಜಿಲ್ಲೆಯ ಎಲ್ಲಾ ಸಾರ್ವಜನಿಕರು ಕೇಂದ್ರ ಸರ್ಕಾರದ ಸೂಚನೆಯಂತೆ ಕಾರ್ಯಕ್ರಮದಲ್ಲಿ ಮನೆಯಿಂದಲೇ ಸದರಿ ಲಿಂಕ್ ಮೂಲಕ ಲಾಗಿನ್ ಆಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅವರು ಸೂಚಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply