ಬಾಗಲಕೋಟೆ-  ಬಾಗಲಕೋಟೆ  ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಕೊರೊನಾ ಪ್ರಕರಣಗಳು  ದೃಢ ಪಟ್ಟಿರುವದಿಲ್ಲವೆಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ಬಹುದಿನಗಳ ಬಳಿಕ ಜಿಲ್ಲೆಯಲ್ಲಿ ಒಂದೇ ಒಂದು ಪ್ರಕರಣ ದಾಖಲಾಗದ ದಿನ ಇದಾಗಿದೆ ಎಂದಿದ್ದಾರೆ.  ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13705 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13532 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. 2798 ಕೊರೊನಾ ಸ್ಯಾಂಪಲಗಳನ್ನು ಪರೀಕ್ಷಿಸಲಾಗಿದೆ. ಇನ್ನು 9313 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.

ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 294553 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 270975 ನೆಗಟಿವ್ ಪ್ರಕರಣ,  ಹಾಗೂ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 37 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 462 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

About Author

Priya Bot

Leave A Reply